HomeKarnatakaBREAKING: ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ

BREAKING: ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ

ಬೆಂಗಳೂರು: ಪಟಾಕಿ ಅನ್ ಲೋಡ್ ಮಾಡುತ್ತಿದ್ದಾಗ ಅವಘಡ ಸಂಭವಿಸಿದ್ದು, ಪಟಾಕಿ ಅಂಗಡಿಗೆ ಬೆಂಕಿ ಬಿದ್ದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ.

ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಲಾರಿಯಿಂದ ಪಟಾಕಿ ಅನ್ ಲೋಡ್ ಮಾಡುವಾಗ ಪಟಾಕಿ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಅಂಗಡಿ ಹೊತ್ತಿ ಉರಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು, 4-5 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಅಪಾರ ಪ್ರಮಾಣದ ಪಟಾಕಿ, ಅಕ್ಕಪಕ್ಕದ ಅಂಗಡಿಗಳು ಬೆಂಕಿಗಾಹುತಿಯಾಗಿವೆ.

For Latest News Updates, Join Our Whatsapp Community🚩
RELATED ARTICLES

Most Popular