
ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕ್ಷಣಾರ್ಧದಲ್ಲಿ ಪಟಾಕಿ ಅಂಗಡಿ ಧಗ ಧಗನೆ ಹೊತ್ತಿ ಉರಿದಿದೆ. ಬೆಂಕಿ ಕೆನ್ನಾಲಿಗೆಗೆ ಅಕ್ಕಪಕ್ಕದ 4-5 ಅಂಗಡಿಗಳು ಬೆಂಕಿಗಾಹುತಿಗಿವೆ. ಅಂಗಡಿಯ ಎದುರು ನಿಲ್ಲಿಸಿದ್ದ ಮೂರು ಬೈಕ್ ಗಳು ಸುಟ್ಟು ಕರಕಲಾಗಿವೆ.
ಬೆಂಕಿ ಅವಘಡಲ್ಲಿ ಓರ್ವ ವ್ಯಕ್ತಿ ನಾಪತ್ತೆಯಾಗಿದ್ದಾನೆ. ಮೂವರಿಗೆ ಸುಟ್ಟಗಾಯಗಳಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ಆರಿಸಲು ಹರಸಾಹಸ ಪಟ್ಟಿದ್ದಾರೆ. ಬೆಂಕಿಯಿಂದಾಗಿ ಪಟಾಕಿಗಳು ಸಿಡಿಯುತ್ತಿದ್ದು, ಸುತ್ತಮುತ್ತಲು ದಟ್ಟ ಹೊಗೆ ಆವರಿಸಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

