BIG NEWS: ದೀಪಾವಳಿಗೆ ರಾಜ್ಯಾದ್ಯಂತ ರಾತ್ರಿ 8 ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

ಬೆಂಗಳೂರು: ದೀಪಾವಳಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟಿಸಿದ್ದು, ದಿನಕ್ಕೆ 2 ಗಂಟೆ ಮಾತ್ರ ಸುಡುಮದ್ದು ಸಿಡಿಸಲು ಅವಕಾಶ ನೀಡಲಾಗಿದೆ.

ರಾಜ್ಯಾದ್ಯಂತ ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ದೀಪಾವಳಿ ಸಮೀಪಿಸುತ್ತಿರುವಂತೆ ರಾಜ್ಯ ಸರ್ಕಾರ ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗಸೂಚಿ ಹೊರಡಿಸಿದೆ.

ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಕಳೆದ ತಿಂಗಳು ಸುತ್ತೋಲೆ ಹೊರಡಿಸಿದ್ದು, ಗುರುವಾರ ಪೌರಾಡಳಿತ ನಿರ್ದೇಶನಾಲಯದಿಂದ ಆದೇಶ ಹೊರಡಿಸಲಾಗಿದೆ. 2 ಗಂಟೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ. ಉಳಿದ ಅವಧಿಯಲ್ಲಿ ಪಟಾಕಿ ಸಿಡಿಸಲು ನಿರ್ಬಂಧ ವಿಧಿಸಲಾಗಿದೆ. ಹಬ್ಬದ ಆಚರಣೆ ವೇಳೆ ನಿಗದಿತ ಗುಣ ಮಾಪನಗಳಿಗೆ ಸರಿಹೊಂದುವ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಯಾವುದೇ ಪ್ರಾಣಿ-ಪಕ್ಷಿ, ಮಕ್ಕಳು, ವೃದ್ಧರಿಗೆ ತೊಂದರೆಯಾಗದಂತೆ ಗಮನಿಸಬೇಕು. ಆಸ್ಪತ್ರೆ, ಶಿಕ್ಷಣ ಸಂಸ್ಥೆ, ನಿಷೇಧಿತ ಪ್ರದೇಶಗಳಲ್ಲಿ ಪಟಾಕಿ ಸಿಡಿಸುವಂತಿಲ್ಲ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read