HomeKarnatakaBIG NEWS: ದೀಪಾವಳಿ ವೇಳೆ ರಾತ್ರಿ 8ರಿಂದ 10 ಗಂಟೆವರೆಗೆ ಹಸಿರು ಪಟಾಕಿ ಮಾತ್ರ ಸಿಡಿಸಲು...

BIG NEWS: ದೀಪಾವಳಿ ವೇಳೆ ರಾತ್ರಿ 8ರಿಂದ 10 ಗಂಟೆವರೆಗೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ.

ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮತ್ತು ಬಳಕೆ ಮಾಡಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ನವೆಂಬರ್ ನಲ್ಲಿ ದೀಪಾವಳಿ ಹಬ್ಬ ಆಚರಿಸಲಿದ್ದು, ಪಟಾಕಿ ಸಿಡಿಸುವುದರಿಂದ ಉಂಟಾಗುವ ಪರಿಸರ ಮಾಲಿನ್ಯ, ಜನರ ಆರೋಗ್ಯ ಗಮನದಲ್ಲಿಟ್ಟುಕೊಂಡು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಸಿರು ಪಟಾಕಿಗಳ ಬಳಕೆಗೆ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಪ್ರೀಂಕೋರ್ಟ್ ಆದೇಶದಂತೆ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ಬೇರೆ ಅವಧಿಯಲ್ಲಿ ಪಟಾಕಿ ಸಿಡಿಸಬಾರದು. ರಾಜ್ಯ ಅತ್ಯಂತ ಕಟ್ಟುನಿಟ್ಟಾಗಿ ಈ ಆದೇಶ ಜಾರಿಗೆ ಎಲ್ಲ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular