ಬೆಂಗಳೂರು: ಕ್ರೇನ್ ರಿಪೇರಿ ಮಾಡುವ ಲ್ಯಾಡರ್ ಕುಸಿದು ಬಿದ್ದ ಪರಿಣಾಮ ಐವರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂ ನಲ್ಲಿರುವ ಮೇಡಹಳ್ಳಿ ಬಡಾವಣೆಯಲ್ಲಿ ನಡೆದಿದೆ.
ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಐವರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಭಟ್ಟರಹಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜನವತಿ ಪ್ರದೇಶದಲ್ಲಿ ಅನುಮತಿಯಿಲ್ಲದೇ ಕ್ರೇನ್ ಕಾರ್ಯನಿರ್ವಹಿಸುತ್ತಿದ್ದು, ಎ.ಎಸ್.ಕ್ರೇನ್ ಸರ್ವಿಸ್ ಕಾಅರ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹತ್ತಾರು ಬಾರಿ ಪೊಲೀಸ್ ಠಾಣೆ, ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಕೇಳಿಲ್ಲ, ದೂರು ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಅವಘಡಗಳು ಸಂಭವಿಸುತ್ತಿದ್ದು, ಜನರು ಜೀವ ಭಯದಲ್ಲಿ ಬದುಕುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.