ಬೆಂಗಳೂರು: ಪ್ರತ್ಯೇಕ ಕೇಡರ್ ಸೃಷ್ಟಿಸಿ ವನ್ಯಜೀವಿ ವೈದ್ಯರ ನೇಮಕ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಬೆಳಗಾವಿ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮೃಗಾಲಯಗಳ ಮುಖ್ಯಸ್ಥರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಸಚಿವರು ಮಾಹಿತಿ ನೀಡಿದ್ದು, ಮೃಗಾಲಯ ಮತ್ತು ಆನೆ ಶಿಬಿರಗಳಲ್ಲಿ ವನ್ಯಜೀವಿ ವೈದ್ಯರ ಕೊರತೆ ನೀಗಿಸಲು ಪ್ರತ್ಯೇಕ ಕೇಡರ್ ಸೃಷ್ಟಿಸಿ 15 ವನ್ಯಜೀವಿ ವೈದ್ಯರ ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಲಾಗಿದೆ. ವನ್ಯಜೀವಿ ವೈದ್ಯರ ನೇಮಕಕ್ಕೆ ಸಿಎಂ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಅಂತೆಯ ಪ್ರತ್ಯೇಕ ಕೇಡರ್ ಸೃಷ್ಟಿಸಿ 15 ವನ್ಯಜೀವಿ ವೈದ್ಯರ ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
