ಶ್ರೀರಂಗಪಟ್ಟಣ: ಸ್ಮಶಾನಕ್ಕೆ ತೆರಳಲು ಸಾಧ್ಯವಾಗದೆ ವ್ಯಕ್ತಿಯ ಶವವನ್ನು ರಸ್ತೆ ಮಧ್ಯದಲ್ಲಿ ಅಂತ್ಯ ಸಂಸ್ಕಾರ ಮಾಡಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ನಡೆದಿದೆ.
42 ವರ್ಷದ ಸತೀಶ್ ಎಂಬುವರು ಮೃತಪಟ್ಟಿದ್ದು, ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ, ಅದೇ ಗ್ರಾಮದ ರೈತರಿಬ್ಬರು ಜಗಳವಾಡಿಕೊಂಡು ತಮ್ಮ ಜಮೀನುಗಳಿಗೆ ಮುಳ್ಳು ತಂತಿ ಬೇಲಿ ಹಾಕಿಕೊಂಡಿದ್ದರಿಂದ ಸ್ಮಶಾನಕ್ಕೆ ಹೋಗುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಸ್ಮಶಾನಕ್ಕೆ ಶವ ತೆಗೆದುಕೊಂಡು ಹೋಗಲು ಸಾಧ್ಯವಾಗದೇ ರಸ್ತೆಯಲ್ಲಿಯೇ ಮೃತದೇಹವನ್ನು ಸುಟ್ಟು ಅಂತ್ಯಸಂಸ್ಕಾರ ಮಾಡಿದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.