HomeKarnatakaಮಂಗಳೂರು ಪೊಲೀಸರ ಕಾರ್ಯಾಚರಣೆ: ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ 6 ಮಂದಿ ಅರೆಸ್ಟ್

ಮಂಗಳೂರು ಪೊಲೀಸರ ಕಾರ್ಯಾಚರಣೆ: ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ 6 ಮಂದಿ ಅರೆಸ್ಟ್

ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಮಂಗಳೂರು ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ವಿವಿಧೆಡೆ ದಾಳಿ ಮಾಡಿ 6 ಮಂದಿಯನ್ನು ಬಂಧಿಸಿದ್ದಾರೆ.

ಬಜಪೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಜಯಂತ ಪೂಜಾರಿ(41), ದೇವದಾಸ ಪೂಜಾರಿ(34), ರಮೇಶ ಪೂಜಾರಿ(48) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಮೂರು ಮೊಬೈಲ್ ಫೋನ್, 4500 ರೂ. ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಆನ್ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿರುವ ಮಾಹಿತಿ ಪಡೆದ ಬಜಪೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತ್ತೊಂದು ಪ್ರಕರಣದಲ್ಲಿ ಆನ್ಲೈನ್ ಮೂಲಕ ಕ್ರಿಕೇಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಪ್ರವೀಣ್ ಎಂಬುವನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಧನು ಪರಾರಿಯಾಗಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ. ಬಂದಿತನಿಂದ ಒಂದು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಲ್ಕಿ ಪೋಲಿಸ್ ಠಾಣೆ ವ್ಯಾಪ್ತಿಯ ಹಳೆಯ ಅಂಗಡಿಯಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಂದ್ರೇಶ್(28) ಎಂಬವನನ್ನು ಬಂಧಿಸಿ ಮೊಬೈಲ್ ಫೋನ್ 2400 ರೂ. ವಶಕ್ಕೆ ಪಡೆಯಲಾಗಿದೆ.

ಕಾರ್ನಾಡು ಬಳಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಕಲ್ಲಪ್ಪ ಭಜಂತ್ರಿ(52) ಎಂಬುವನ ಬಂಧಿಸಿದ್ದು, ಮೊಬೈಲ್ ಹಾಗೂ 2100 ರೂ. ವಶಕ್ಕೆ ಪಡೆದು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular