HomeKarnatakaಕ್ರಿಕೆಟ್ ಆಡುವಾಗಲೇ ದುರಂತ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ಕ್ರಿಕೆಟ್ ಆಡುವಾಗಲೇ ದುರಂತ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ ಘಟನೆ ಧಾರವಾಡ ನಗರದ ಸಿದ್ದರಾಮ ನಗರದಲ್ಲಿ ನಡೆದಿದೆ.

16 ವರ್ಷದ ಶ್ರೇಯಸ್ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಮನೆ ಮಹಡಿ ಮೇಲೆ ಗೆಳೆಯರೊಂದಿಗೆ ಕ್ರಿಕೆಟ್ ಆಡುತ್ತಿದ್ದ ವೇಳೆ ಕ್ಯಾಚ್ ಹಿಡಿಯಲು ಹೋದಾಗ ವಿದ್ಯುತ್ ತಂತಿ ತಗುಲಿ ಅಸ್ವಸ್ಥಗೊಂಡಿದ್ದ ಶ್ರೇಯಸ್ ನನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಶ್ರೇಯಸ್ ಮೃತಪಟ್ಟಿದ್ದು, ಆತನ ಜೊತೆಗಿದ್ದ ಗೆಳೆಯನೂ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಧಾರವಾಡ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular