SHOCKING: ಶಿವರಾತ್ರಿ ಕ್ರಿಕೆಟ್ ಪಂದ್ಯಾವಳಿ ವೇಳೆ ಕಿರಿಕ್; ಚಾಕುವಿನಿಂದ ಇರಿದು ಇಬ್ಬರ ಹತ್ಯೆ

ಬೆಂಗಳೂರು: ಕ್ರಿಕೆಟ್ ಆಡುವಾಗ ಜಗಳ ನಡೆದು ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆ ಮಾಡಲಾಗಿದೆ. ದೊಡ್ಡಬೆಳವಂಗಲದಲ್ಲಿ ಘಟನೆ ನಡೆದಿದ್ದು, ಭರತ್(24), ಪ್ರತೀಕ್(19) ಕೊಲೆಯಾದವರು ಎಂದು ಹೇಳಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಬಿಜೆಪಿ ಮುಖಂಡ ಧೀರಜ್ ಪಂದ್ಯಾವಳಿಯನ್ನು ಆಯೋಜಿಸಿದ್ದರು. ಮೈದಾನದಲ್ಲಿ ಕಾರ್  ನಿಲ್ಲಿಸಿದ್ದನ್ನು ಭರತ್ ಮತ್ತು ಪ್ರತೀಕ್ ಅವರು ಪ್ರಶ್ನಿಸಿದ್ದಾರೆ.

ಈ ವೇಳೆ ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಗ್ರಾಮಸ್ಥರು ಹಾಗೂ ಇತರೆ ಆಟಗಾರರು ಜಗಳ ಬಿಡಿಸಿ ಕಳುಹಿಸಿದ್ದಾರೆ. ಭರತ್ ಮತ್ತು ಪ್ರತೀಕ್ ಅವರು ಬಸ್ ನಿಲ್ದಾಣಕ್ಕೆ ಬಂದಾಗ ಅಟ್ಟಾಡಿಸಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಇಬ್ಬರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಎಸ್‌.ಪಿ. ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read