HomeKarnatakaBIG NEWS: ಕ್ರಿಕೆಟಿಗ ಕೆ.ಸಿ.ಕಾರಿಯಪ್ಪ ವಿರುದ್ಧ ಯುವತಿಗೆ ವಂಚಿಸಿದ ಆರೋಪ; ದೂರು ದಾಖಲು

BIG NEWS: ಕ್ರಿಕೆಟಿಗ ಕೆ.ಸಿ.ಕಾರಿಯಪ್ಪ ವಿರುದ್ಧ ಯುವತಿಗೆ ವಂಚಿಸಿದ ಆರೋಪ; ದೂರು ದಾಖಲು

ಬೆಂಗಳೂರು: ಕರ್ನಾಟಕದ ಯುವ ಕ್ರಿಕೆಟಿಗ, ಐಪಿಎಲ್ ಆಟಗಾರ ಕೆ.ಸಿ.ಕಾರಿಯಪ್ಪ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಮೋಸಮಾಡಿದ್ದಾರೆ ಎಂದು ದೂರು ದಾಖಲಾಗಿದೆ.

ಕ್ರಿಕೆಟಿಗ ಕೆ.ಸಿ.ಕಾರಿಯಪ್ಪ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ, ಕೈಕೊಟ್ಟಿದ್ದಾರೆ. ಗರ್ಭಿಣಿಯಾಗುತ್ತಿದ್ದಂತೆ ಬಲವಂತದಿಂದ ಮಾತ್ರೆ ಕೊಟ್ಟು ಅಬಾರ್ಷನ್ ಮಾಡಿಸಿದ್ದಾರೆ. ಈಗ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಡ್ರಗ್ಸ್ ಸೇವಿಸುತ್ತಿದ್ದೆ ಎಂದು ಸುಳ್ಳು ಆರೋಪ ಮಾಡಿದ್ದಾರೆ ಎಂದು ಯುವತಿ ಆರ್,ಟಿ.ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ ಸ್ಟಾಗ್ರಾಂ ನಲ್ಲಿ ಕೆ.ಸಿ.ಕಾರಿಯಪ್ಪ ಪರಿಚಯವಾಗಿದ್ದು, ಸ್ನೇಹಿತರಾಗಿದ್ದೆವು. ಬಳಿಕ ಮದುವೆಯಾಗುವುದಾಗಿ ಹೇಳಿ ನನ್ನೊಂದಿಗೆ ಸುತ್ತಾಡಿ, ದೈಹಿಕವಾಗಿಯೂ ಬಳಿಸಿಕೊಂಡಿದ್ದು, ಈಗ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅಲ್ಲದೇ ಬೇರೊಂದು ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ನಾನು ಯಾವುದೇ ತನಿಖೆಗೂ ಸಿದ್ಧಳಿದ್ದು, ನ್ಯಾಯ ದೊರಕಿಸಿಕೊಡುವಂತೆ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

For Latest News Updates, Join Our Whatsapp Community🚩
RELATED ARTICLES

Most Popular