30 ನೇ ವಸಂತಕ್ಕೆ ಕಾಲಿಟ್ಟ ಕ್ರಿಕೆಟಿಗ ಶ್ರೇಯಸ್ ಅಯ್ಯರ್

ಸ್ಟೈಲಿಶ್ ಬ್ಯಾಟರ್ ವಿನ್ನಿಂಗ್ ಕ್ಯಾಪ್ಟನ್ ಎಂದೇ ಕರೆಸಿಕೊಳ್ಳುವ ಭಾರತದ ಯುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಇಂದು ತಮ್ಮ 30ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಶ್ರೇಯಸ್ ಅಯ್ಯರ್ ಇದುವರೆಗೂ 62 ಏಕದಿನ ಪಂದ್ಯಗಳನ್ನಾಡಿದ್ದು, 2421 ರನ್ ಬಾರಿಸಿದ್ದಾರೆ. ಇದರಲ್ಲಿ ಐದು ಶತಕ ಹಾಗೂ 18  ಅರ್ಧ ಶತಕಗಳಿವೆ. ಇನ್ನು ಟಿ 20 ಕ್ರಿಕೆಟ್ ನಲ್ಲಿ 51 ಪಂದ್ಯಗಳಲ್ಲಿ 1104 ರನ್ ದಾಖಲಿಸಿದ್ದಾರೆ. ಶ್ರೇಯಸ್ ಅಯ್ಯರ್ ಐಪಿಎಲ್ ನಲ್ಲೂ ಸಾಕಷ್ಟು ಹೆಸರು ಮಾಡಿದ್ದಾರೆ. ಐಪಿಎಲ್ ನಲ್ಲಿ ಕೆಕೆಆರ್ ತಂಡದಲ್ಲಿದ್ದ ಇವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿ 26.75 ಕೋಟಿ ರೂಪಾಯಿಗಳ ದೊಡ್ಡ ಮೊತ್ತಕ್ಕೆ ಖರೀದಿ  ಮಾಡಿದೆ.

ಇಂದು ಸಾಮಾಜಿಕ ಜಾಲತಾಣದಲ್ಲಿ ಶ್ರೇಯಸ್ ಅಯ್ಯರ್ ಅವರಿಗೆ ಹಲವಾರು ಹಿರಿಯ ಹಾಗೂ ಯುವ ಕ್ರಿಕೆಟಿಗರು ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read