alex Certify ಪೆಟ್ರೋಲ್ ಬಂಕ್ ಗೆ ಬಂದವಳ ಮೇಲೆ ನಡೀತು ಸಾಮೂಹಿಕ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಟ್ರೋಲ್ ಬಂಕ್ ಗೆ ಬಂದವಳ ಮೇಲೆ ನಡೀತು ಸಾಮೂಹಿಕ ಅತ್ಯಾಚಾರ

प्रतीकात्मक तस्वीर

ಲಾಕ್ ಡೌನ್ ಜಾರಿಯಲ್ಲಿದ್ದರೂ ದೇಶದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಿಲ್ಲ. ಮಧ್ಯಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಬುಧವಾರ ರಾತ್ರಿ ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದೆ.

ರಾತ್ರಿ ಅಣ್ಣನ ಜೊತೆ ಪೆಟ್ರೋಲ್ ಬಂಕ್ ಗೆ ಹೋಗಿದ್ದ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಅಣ್ಣನ ಮೇಲೆ ಹಲ್ಲೆ ನಡೆಸಿದ ಆರೋಪಿಗಳು ಆತನನ್ನು ಬಾವಿಗೆ ಎಸೆದಿದ್ದಾರೆ. ನಂತ್ರ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾರೆ. ಏಳು ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಇದರಲ್ಲಿ 5 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳಲ್ಲಿ ಮೂವರು ಅಪ್ರಾಪ್ತ ವಯಸ್ಕರು. ಪರಾರಿಯಾಗಿದ್ದ ಉಳಿದ ಇಬ್ಬರು ಆರೋಪಿಗಳನ್ನು ಹುಡುಕಲಾಗುತ್ತಿದೆ. ಮಾಹಿತಿಯ ಪ್ರಕಾರ, ಎಲ್ಲಾ ಆರೋಪಿಗಳು ಕೂಲಿ ಕೆಲಸಗಾರರು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...