alex Certify ಕುರಿ ಮಾರಿ ಕುಡಿದು ಮನೆಗೆ ಬಂದು ಜಗಳವಾಡಿದ ತಂದೆ, ಪುತ್ರನಿಂದಲೇ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುರಿ ಮಾರಿ ಕುಡಿದು ಮನೆಗೆ ಬಂದು ಜಗಳವಾಡಿದ ತಂದೆ, ಪುತ್ರನಿಂದಲೇ ಘೋರ ಕೃತ್ಯ

ಬಾಗಲಕೋಟೆ: ಕುಡಿದು ಬಂದು ಗಲಾಟೆ ಮಾಡುತ್ತಿದ್ದ ತಂದೆಯನ್ನೇ ಮಗ ಹತ್ಯೆ ಮಾಡಿದ ಘಟನೆ ಗೋನಾಳ ಗ್ರಾಮದಲ್ಲಿ ನಡೆದಿದೆ.

55 ವರ್ಷದ ಬಸಪ್ಪ ಹೊಸಗೌಡರ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಗೋನಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಕುರಿ ಮಾರಿ ಮನೆಗೆ ಕುಡಿದು ಬಂದಿದ್ದ ಬಸಪ್ಪ ಮನೆಯವರೊಂದಿಗೆ ಗಲಾಟೆ ಮಾಡಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದ್ದು, ಇಟ್ಟಿಗೆಯಿಂದ ಹೊಡೆದು ಬಸಪ್ಪನ ಮಗ ಮತ್ತು ಪತ್ನಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬಾದಾಮಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...