alex Certify SHOCKING: ಮಾಲೀಕನ ಪತ್ನಿಯೊಂದಿಗೆ ಸಂಬಂಧ ಬೆಳೆಸಿ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಮಾಲೀಕನ ಪತ್ನಿಯೊಂದಿಗೆ ಸಂಬಂಧ ಬೆಳೆಸಿ ಘೋರ ಕೃತ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆ ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಭೀಕರ ಹತ್ಯೆ ಪ್ರಕರಣವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ರುಂಡ-ಮುಂಡ ಕತ್ತರಿಸಿ ಫೋಟೋಗ್ರಾಫರ್ ಒಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಫೋಟೋಗ್ರಾಫರ್ ಬಳಿ ಕೆಲಸ ಮಾಡುತ್ತಿದ್ದ ಆರೋಪಿ ತನ್ನ ಸ್ನೇಹಿತರಿಗೆ 10 ಸಾವಿರ ರೂಪಾಯಿಗೆ ಸುಪಾರಿ ನೀಡಿ ಮಾಲೀಕನನ್ನು ಕೊಲೆ ಮಾಡಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಗೊತ್ತಾಗಿದೆ.

ಫೋಟೋ ಸ್ಟುಡಿಯೋದಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಈ ವಿಚಾರ ಗೊತ್ತಾಗಿ ಮಾಲೀಕ ಆತನನ್ನು ಕೆಲಸದಿಂದ ಬಿಡಿಸಿದ್ದ. ಇದರಿಂದ ಆಕ್ರೋಶಗೊಂಡ ಯುವಕ ಸ್ನೇಹಿತರೊಂದಿಗೆ ಸೇರಿ ಫೋಟೋಗ್ರಾಫರ್ ನನ್ನು ಡಿಸೆಂಬರ್ 25 ರಂದು ಖಾನಾಪುರ ಅರಣ್ಯ ಪ್ರದೇಶಕ್ಕೆ ಕರೆಸಿಕೊಂಡು ರುಂಡ ಕತ್ತರಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...