ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಕಾವಲಭೈರಸಂದ್ರ ಅಂಬೇಡ್ಕರ್ ಕಾಲೇಜ್ ಬಳಿ ಘಟನೆ ನಡೆದಿದೆ.
30 ವರ್ಷದ ಕೃಷ್ಣಮೂರ್ತಿ ಎಂಬುವನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಮೃತನ ಎರಡನೇ ಪತ್ನಿ ಸುಪಾರಿ ಕೊಲೆ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ. ಪ್ರತಿದಿನ ಮದ್ಯ ಸೇವಿಸಿ ಬಂದು ಕೃಷ್ಣಮೂರ್ತಿ ಗಲಾಟೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಮನೆ ಬಳಿ ಬಂದು ಪೊಲೀಸರು ವಾರ್ನಿಂಗ್ ಮಾಡಿದ್ದರು. ಈತನ ಕಿರುಕುಳದಿಂದ ಬೇಸತ್ತು ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ. ಮೂವರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.