ಬೆಂಗಳೂರು: ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ನಟಿ ರಾಗಿಣಿ ಅವರನ್ನು ಸಿಸಿಬಿ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಲಾಗುವುದು.
ನಿನ್ನೆ ಹಲವು ಗಂಟೆಗಳ ಕಾಲ ರಾಗಿಣಿ ಅವರ ವಿಚಾರಣೆ ನಡೆಸಿದ ಅಧಿಕಾರಿಗಳು 40ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದಾರೆ. ನಂತರ ಅವರನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ. ಇವತ್ತು ಪುನಃ ಸಿಸಿಬಿ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಲಾಗುವುದು.
2018ರ ಪ್ರಕರಣ ರೀ ಓಪನ್ ಮಾಡುವ ಕುರಿತು, ಡ್ರಗ್ಸ್, ಪಾರ್ಟಿ, ರವಿಶಂಕರ್ ಪರಿಚಯ ಮೊದಲಾದ ವಿಷಯಗಳ ಬಗ್ಗೆ ಸಿಸಿಬಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ವಿಚಾರಣೆ ವೇಳೆ ರಾಗಿಣಿ ಸರಿಯಾಗಿ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಇವತ್ತು ಕೂಡ ವಿಚಾರಣೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.