
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಪಟ್ಟಣದಲ್ಲಿ ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಹತ್ಯೆ ಮಾಡಲಾಗಿದೆ
ಅಮ್ಜದ್(43) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಅವರನ್ನು ಓಮಿನಿ ಮೂಲಕ ಹಿಂಬಾಲಿಸಿ ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮೃತದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.