ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬೆಳಗ್ಗೆಯಿಂದ ಸಂಜೆಯವರೆಗೆ ಭೌತಿಕ ತರಗತಿ ನಡೆಸಲು ಸೂಚನೆ ನೀಡಲಾಗಿದೆ.
ಕೊರೋನಾ ಮಾರ್ಗಸೂಚಿಗಳನ್ನು ಅನುಸಿರುವುದರೊಂದಿಗೆ ಸಂಜೆವರೆಗೆ ಭೌತಿಕ ತರಗತಿ ನಡೆಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಕೊರೋನಾ ಪೂರ್ವ ಮಾದರಿಯಲ್ಲಿ ದಿನಪೂರ್ತಿ ತರಗತಿಗಳನ್ನು ನಡೆಸಲು ಶಿಕ್ಷಣ ಇಲಾಖೆ ಅವಕಾಶ ನೀಡಿದ್ದು, ಎಲ್ಲಾ ಶಾಲೆಗಳಲ್ಲಿ ಮಾರ್ಗಸೂಚಿಯನ್ನು ಅನುಸರಿಸಿ ಪೂರ್ಣಪ್ರಮಾಣದಲ್ಲಿ ಸಂಜೆಯವರೆಗೂ ತರಗತಿ ನಡೆಸಬಹುದು. ಭೌತಿಕ ತರಗತಿಗೆ ಹಾಜರಾಗುವಂತೆ ವಿದ್ಯಾರ್ಥಿಗಳಿಗೆ ಬಲವಂತ ಮಾಡಬಾರದು ಎಂದು ಹೇಳಲಾಗಿದೆ.