ದಾವಣಗೆರೆ: ನಗರದ ಬಸವರಾಜ ಪೇಟೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬಸವರಾಜ ಪೇಟೆಯ ಸೀಮೆಎಣ್ಣೆ ಪರಮೇಶ್(45) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಆಟೋದಲ್ಲಿ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ಮನೆಯ ಸಮೀಪವೇ ಪರಮೇಶ್ವರ್ ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕುಟುಂಬದವರ ಎದುರಲ್ಲೇ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.