ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ಕಲ್ಲೂರು ಕೆ ಗ್ರಾಮದಲ್ಲಿ ಮದ್ಯ ಸೇವನೆಗೆ ಹಣ ಕೊಡದ ತಾಯಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಕೊಲೆ ಮಾಡಿದ ಘಟನೆ ನಡೆದಿದೆ.
75 ವರ್ಷದ ಭೀಮಬಾಯಿ ಪೂಜಾರಿ ಮೃತಪಟ್ಟವರು. ಆಕೆಯ ಮಗ ಯಲ್ಲಪ್ಪ ಪೂಜಾರಿ ಇವತ್ತು ಬೆಳಗಿನಜಾವನ ಮದ್ಯಸೇವನೆಗೆ ಹಣ ಕೊಡದ ಕಾರಣ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ.