ದಾವಣಗೆರೆ: ದಾವಣಗೆರೆ ಜಿಲ್ಲೆ ಹರಿಹರದ ನರ್ತಕಿ ಬಾರ್ ಸಮೀಪ ವಿವಾಹಿತ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಹರಿಹರದ ಕುರುಬರ ಕೇರಿ ನಿವಾಸಿಯಾಗಿರುವ 25 ವರ್ಷದ ಮಹಿಳೆಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಈಕೆ ಚೇತನ್ ಎಂಬವನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದು. ಪ್ರಿಯಕರ ಚೇತನ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹರಿಹರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.