alex Certify ರಾತ್ರಿ ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಪ್ರಿಯಕರನೊಂದಿಗೆ ಸಂಬಂಧ ಬೆಳೆಸ್ತಿದ್ದ ಪತ್ನಿಯಿಂದ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಪ್ರಿಯಕರನೊಂದಿಗೆ ಸಂಬಂಧ ಬೆಳೆಸ್ತಿದ್ದ ಪತ್ನಿಯಿಂದ ಘೋರ ಕೃತ್ಯ

ಮಂಡ್ಯ ತಾಲ್ಲೂಕಿನ ಹನಕೆರೆ ಗ್ರಾಮದಲ್ಲಿ ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಪ್ರದೀಪ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಆತನ ಪತ್ನಿ ಮತ್ತು ಪ್ರಿಯಕರ ಕೊಲೆ ಆರೋಪಿಗಳಾಗಿದ್ದು, ಇಬ್ಬರನ್ನು ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪತಿ ಮತ್ತು ಪತ್ನಿ ಮದುವೆಗೂ ಮೊದಲು ನೆರೆಹೊರೆಯವರಾಗಿದ್ದು, ಪ್ರೀತಿಸಿ ಮದುವೆಯಾಗಿದ್ದರು. ಅವರಿಗೆ 13 ವರ್ಷದ ಮಗನಿದ್ದಾನೆ.

ಮೂರು ವರ್ಷಗಳ ಹಿಂದೆ ಮಧು ನಾಯಕ್ ಪರಿಚಯಿಸಿಕೊಂಡ ಪತ್ನಿ ಆತನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಾಳೆ. ಈ ವಿಚಾರ ಗೊತ್ತಾಗಿ ಮನೆಯವರು ಬುದ್ಧಿವಾದ ಹೇಳಿದ್ದಾರೆ. ಆದರೆ, ಪ್ರಿಯಕರನ ಸಹವಾಸ ಬಿಡದ ಪತ್ನಿ ಆರು ತಿಂಗಳಿನಿಂದ ಗಂಡನಿಗೆ ಗೊತ್ತಾಗದಂತೆ ನಿದ್ದೆ ಮಾತ್ರೆ ಕೊಟ್ಟು ರಾತ್ರಿ ಪ್ರಿಯಕರನೊಂದಿಗೆ ಅಕ್ರಮ ಸಂಬಂಧ ಬೆಳೆಸುತ್ತಿದ್ದಳು ಎಂದು ಹೇಳಲಾಗಿದೆ.

ನವೆಂಬರ್ 17 ರಂದು ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಕೊಲೆ ಮಾಡಲು ನಿಶ್ಚಯಿಸಿದ ಪತ್ನಿ ನಿದ್ದೆ ಮಾತ್ರೆ ಕೊಟ್ಟು ಮಲಗಿದ ಬಳಿಕ ಪ್ರಿಯಕರನೊಂದಿಗೆ ಸೇರಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಬಿಂಬಿಸಿದ್ದಾರೆ. ಅಂತ್ಯಕ್ರಿಯೆ ಸಂದರ್ಭದಲ್ಲಿ ದೇಹದ ಮೇಲೆ ಗಾಯಗಳಾಗಿದ್ದನ್ನು ಗಮನಿಸಿದ ಕುಟುಂಬದವರು ನಂತರದಲ್ಲಿ ಪತ್ನಿಯ ನಡವಳಿಕೆಯಲ್ಲಿ ಬದಲಾವಣೆಯಾಗಿರುವ ಬಗ್ಗೆ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತನ ಪತ್ನಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಇಬ್ಬರನ್ನು ಬಂಧಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...