alex Certify ಹಾಡಹಗಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ

ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಹತ್ಯೆ ಮಾಡಲಾಗಿದೆ.

ಮಳವಳ್ಳಿ ಎನ್ಇಎಸ್ ಬಡಾವಣೆ ನಿವಾಸಿ ಶರತ್(23) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಹೋಟೆಲ್ ನಲ್ಲಿ ಇದ್ದ ಶರತ್ ನನ್ನು ಆಟೋದಲ್ಲಿ ಬಂದಿದ್ದ ದುಷ್ಕರ್ಮಿಗಳು ಅಪಹರಿಸಿದ್ದಾರೆ. ಆತನ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದ್ದು ಗಂಭೀರವಾಗಿ ಗಾಯಗೊಂಡಿದ್ದ ಶರತ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಶರತ್ ಒಂದು ವಾರದ ಹಿಂದೆ ಯುವತಿಯೊಬ್ಬಳಿಗೆ ಆಕೆಗೆ ಪ್ರೀತಿಸಿ ಮೋಸ ಮಾಡಿದ ಯುವಕನ ಮನೆ ವಿಳಾಸ ತೋರಿಸಿದ್ದು, ಇದೇ ಕೊಲೆಗೆ ಕಾರಣವಿರಬಹುದು ಎಂದು ಹೇಳಲಾಗಿದೆ. ಮಳವಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...