alex Certify ಶಾಲೆಯಲ್ಲೇ 3 ದಿನ ಕೂಡಿ ಹಾಕಿ ನಿರಂತರ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಯಲ್ಲೇ 3 ದಿನ ಕೂಡಿ ಹಾಕಿ ನಿರಂತರ ಅತ್ಯಾಚಾರ

ಸಿರೋಹಿ: ರಾಜಸ್ತಾನದ ಸಿರೋಹಿ ಜಿಲ್ಲೆಯ ಪಿಂಡ್ವಾಡ  ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಿ 3 ದಿನಗಳ ಕಾಲ ನಿರಂತರ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.

ಅಪ್ರಾಪ್ತನಾಗಿರುವ ಬಾಲಕ ಮನೆಯಿಂದ ಹೊರಗೆ ಹೋಗಿದ್ದ ಬಾಲಕಿಯನ್ನು ಅಪಹರಿಸಿ ಶಾಲೆಗೆ ಎಳೆದುಕೊಂಡು ಹೋಗಿದ್ದಾನೆ. ಮೂರು ದಿನಗಳ ಕಾಲ ಕೂಡಿ ಹಾಕಿ ಅತ್ಯಾಚಾರ ಎಸಗಿದ್ದು ಬಳಿಕ ಬಾಲಕಿ ಮನೆಯ ಬಳಿ ಬಿಟ್ಟು ಪರಾರಿಯಾಗಿದ್ದಾನೆ.

ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಾರಿಯಾಗಿರುವ ಬಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...