
ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯ ಗೋಪನಕೊಪ್ಪ ಅಮರ ಕಾಲೋನಿಯ ಕ್ರಾಸ್ ಬಳಿ ಘಟನೆ ನಡೆದಿದೆ.
22 ವರ್ಷದ ಅಭಿಷೇಕ್ ಗೌಡ ಪಾಟೀಲ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಬಿಜೆಪಿ ಮುಖಂಡ ಈಶ್ವರಗೌಡ ಪಾಟೀಲ್ ಅವರ ಅಣ್ಣನ ಮಗ ಅಭಿಷೇಕ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ, ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.