
ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ಬಳುಂಡಗಿ ಗ್ರಾಮದ ಬಳಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ ಅವರ ಕಿರಿಯ ಸಹೋದರ ಹನುಮಂತನ ಕೂಡಲಗಿ(40) ಮೃತಪಟ್ಟವರು ಎಂದು ಹೇಳಲಾಗಿದೆ. ಕೂಡಲಗಿ ಗ್ರಾಮದಿಂದ ಕಲಬುರ್ಗಿಗೆ ತೆರಳುತ್ತಿದ್ದ ವೇಳೆಯಲ್ಲಿ ದುಷ್ಕರ್ಮಿಗಳು ಅವರ ಮೇಲೆ ದಾಳಿ ಮಾಡಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಹನುಮಂತ ಕೂಡಲೇ ಅವರನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.