alex Certify
ಕನ್ನಡ ದುನಿಯಾ       Mobile App
       

Kannada Duniya

ಬುದ್ಧಿವಾದ ಹೇಳಿದ್ರೂ ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಮುಂದುವರೆಸಿ ಜೀವ ಕಳೆದುಕೊಂಡ ಮೈದುನ

ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕು ಅಂತರಸಂತೆಯಲ್ಲಿ ಶನಿವಾರ ರಾತ್ರಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಲಾಗಿದೆ.

ಮೈಸೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳ ಶ್ಯಾಮ್ ಅವರ ಕಾರು ಚಾಲಕ ಸುನಿಲ್(28) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಅಂತರಸಂತೆ ನಿವಾಸಿಯಾಗಿರುವ ಸುನಿಲ್ ದಾಯಾದಿ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದೇ ಕೊಲೆಗೆ ಕಾರಣ ಎನ್ನಲಾಗಿದೆ.

ಸಂಬಂಧಿಯಾಗಿದ್ದ ದಾಯಾದಿ ಅಣ್ಣನ ಪತ್ನಿಯೊಂದಿಗೆ ಸುನಿಲ್ ಅನೈತಿಕ ಸಂಬಂಧ ಹೊಂದಿದ್ದು ಇದೇ ವಿಚಾರಕ್ಕೆ ಶನಿವಾರ ರಾತ್ರಿ ಅಂತರಸಂತೆ ಬೇಕರಿ ಬಳಿ ನಿಂತಿದ್ದ ಸುನಿಲ್ ಮೇಲೆ ಎಳನೀರು ವ್ಯಾಪಾರಿಯಾಗಿರುವ ಆರೋಪಿ ಮಚ್ಚಿನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದು, ಮೈಸೂರಿನ ಆಸ್ಪತ್ರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸುನಿಲ್ ಮೃತಪಟ್ಟಿದ್ದಾರೆ.

ಬೀಚನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಪತ್ನಿಯೊಂದಿಗೆ ಸಂಬಂಧ ಕಡಿದುಕೊಳ್ಳುವಂತೆ ಬುದ್ಧಿಮಾತು ಹೇಳಿದರೂ ಕೇಳದ ಹಿನ್ನಲೆಯಲ್ಲಿ ಕೊಲೆ ಮಾಡಿರುವುದಾಗಿ ಆರೋಪಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉಳಿದ ಅವಧಿಯನ್ನು ಪೂರೈಸಲಿದೆಯಾ...?

    View Results

    Loading ... Loading ...