
ಮೈಸೂರು: ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮೈಸೂರಿನ ಕ್ಯಾತಮಾರನಹಳ್ಳಿ ಶಾಲೆ ಸಮೀಪ ನಡೆದಿದೆ.
30 ವರ್ಷದ ಸುನಿತಾ ಹತ್ಯೆ ಮಾಡಿ ಆರೋಪಿ ಗಿರೀಶ್ ಪರಾರಿಯಾಗಿದ್ದಾನೆ. ಆತನನ್ನು ತಡೆಯಲೆತ್ನಿಸಿದ ಸುನೀತಾ ತಾಯಿ ಭಾರತಿ ಅವರ ಮೇಲೆಯೂ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಭಾರತಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೊಳೆತ ತರಕಾರಿಯನ್ನು ಮನೆ ಪಕ್ಕ ಎಸೆಯುವ ವಿಷಯಕ್ಕೆ ಅಕ್ಕಪಕ್ಕದ ಮನೆಯವರ ನಡುವೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.