
ಮೈಸೂರು: ತಾಯಿ, ಪತ್ನಿ, ಮಕ್ಕಳಿಬ್ಬರನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿದ ಭೀಕರ ಘಟನೆ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ತಾಯಿ ಕೆಂಪಮ್ಮ, ಪತ್ನಿ ಗಂಗಾ ಹಾಗೂ ಮಕ್ಕಳಾದ ಸಾಮ್ರಾಟ್, ರೋಹಿತ್ ಅವನ್ನು ಮಣಿಕಂಠ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಮಾಹಿತಿ ತಿಳಿದ ಸರಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.