ಮೈಸೂರು: ಟಿ. ನರಸೀಪುರ ತಾಲೂಕಿನ ಹೆಗ್ಗೂರು ಗ್ರಾಮದಲ್ಲಿ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾರೆ.
5 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ 25 ವರ್ಷದ ಮಹಿಳೆ ಗರ್ಭಿಣಿಯಾಗಿದ್ದು, ಪತಿಯೇ ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಆರೋಪ ಕೇಳಿಬಂದಿದೆ.
ವರದಕ್ಷಿಣೆಗಾಗಿ ಕಿರುಕುಳ ನೀಡಿದ ಪತಿ ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆನ್ನಲಾಗಿದೆ. ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.