ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರನನ್ನು ಹತ್ಯೆ ಮಾಡಲಾಗಿದೆ. ಗಡಿಯಲ್ಲಿ ನುಸುಳಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಭಾರತೀಯ ಸೇನೆಯಿಂದ ಹತ್ಯೆ ಮಾಡಲಾಗಿದ್ದು, ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಗಡಿಯಲ್ಲಿ ಪಾಕ್ ಭಯೋತ್ಪಾದಕ ನವೆಂಬರ್ 25 ರ ರಾತ್ರಿ ಗಡಿಯಲ್ಲಿ ನುಸುಳಲು ಯತ್ನಿಸಿದಾಗ ಭದ್ರತಾ ಪಡೆ ಸಿಬ್ಬಂದಿ ಹೊಡೆದುರುಳಿಸಿದ್ದಾರೆ. ಘಟನಾ ಸ್ಥಳದಿಂದ ಮೃತದೇಹ, ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಹೇಳಲಾಗಿದೆ.