alex Certify
ಕನ್ನಡ ದುನಿಯಾ       Mobile App
       

Kannada Duniya

ಅಡುಗೆ ಮಾಡ್ತಿದ್ಲು ಅಮ್ಮ, ಕಂದಮ್ಮಗಳು ಆಟವಾಡುವಾಗಲೇ ಮನಕಲಕುವ ಘಟನೆ

ಆಟವಾಡುವಾಗ ಕ್ರಿಮಿನಾಶಕ ಸೇವಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು ಮಕ್ಕಳ ಸಾವಿನ ಸುದ್ದಿ ಕೇಳಿ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಯಾದಗಿರಿ ಜಿಲ್ಲೆ ವಡಗೇರಾ ತಾಲ್ಲೂಕಿನ ಕೊಡಾಲ್ ಗ್ರಾಮದಲ್ಲಿ ಘಟನೆ ನಡೆದಿದೆ. ತಾಯಿ ಶಹನಾಜ್ ಮನೆಯಲ್ಲಿ ಅಡುಗೆ ಮಾಡುವ ಸಂದರ್ಭದಲ್ಲಿ ಆಟವಾಡುತ್ತಿದ್ದ ವೇಳೆ 4 ತಿಂಗಳ ಅಪ್ಸಾನಾ 2 ವರ್ಷದ ಖೈರುನ್ ಕ್ರಿಮಿನಾಶಕ ಸೇವಿಸಿದ್ದಾರೆ.

ಅಸ್ವಸ್ಥರಾಗಿದ್ದ ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಮೃತಪಟ್ಟಿದ್ದಾರೆ. ಕೆಲಸಕ್ಕೆ ಹೋಗಿದ್ದ ಗಂಡನಿಗೆ ಹೆದರಿದ ತಾಯಿ ಶಹನಾಜ್ ಕೂಡ ಕ್ರಿಮಿನಾಶಕ ಸೇವಿಸಿ ಅಸ್ವಸ್ಥರಾಗಿದ್ದು, ಅವರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

Subscribe Newsletter

Get latest updates on your inbox...

Opinion Poll

  • ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉಳಿದ ಅವಧಿಯನ್ನು ಪೂರೈಸಲಿದೆಯಾ...?

    View Results

    Loading ... Loading ...