alex Certify ಜಮೀನಿನಲ್ಲಿ ಹರಿದ ನೆತ್ತರು ಕಂಡು ಬೆಚ್ಚಿಬಿದ್ದ ಜನ: ಆಸ್ತಿಗಾಗಿ ನಡೆದ ಜಗಳ ನಾಲ್ವರ ಕೊಲೆಯಲ್ಲಿ ಅಂತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಮೀನಿನಲ್ಲಿ ಹರಿದ ನೆತ್ತರು ಕಂಡು ಬೆಚ್ಚಿಬಿದ್ದ ಜನ: ಆಸ್ತಿಗಾಗಿ ನಡೆದ ಜಗಳ ನಾಲ್ವರ ಕೊಲೆಯಲ್ಲಿ ಅಂತ್ಯ

ಹಾಸನ: ಆಸ್ತಿ ವಿಚಾರಕ್ಕೆ ನಡೆದ ಜಗಳ ನಾಲ್ವರ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮುರಗೋಡನಹಳ್ಳಿಯಲ್ಲಿ ನಡೆದಿದೆ.

ಮುರಗೋಡನಹಳ್ಳಿಯ ಜಮೀನಿನಲ್ಲಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಪಾಪಣ್ಣ ಮತ್ತು ಮಲ್ಲೇಶ್ ಕುಟುಂಬಗಳ ನಡುವೆ ಆಸ್ತಿ ವಿಚಾರಕ್ಕೆ ಜಗಳವಾಗಿದೆ. ಜಮೀನಿನಲ್ಲಿ ಮೂವರನ್ನು ಕೊಲೆ ಮಾಡಲಾಗಿದೆ. ಜಮೀನಿನಲ್ಲಿ ಮಲ್ಲೇಶ್, ರವಿ, ಬಸವರಾಜ್ ಅವರು ಮೃತಪಟ್ಟಿದ್ದು, ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪಾಪಣ್ಣ ಚಿಕಿತ್ಸೆ ಫಲಿಸದೇ ಹಾಸನದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮುರಗೋಡನಹಳ್ಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೊಳೆನರಸೀಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಳಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...