ರಾಯಚೂರಿನಲ್ಲಿ ಹಾಡಹಗಲೇ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ನಿವೃತ್ತ ಶಿರಸ್ತೆದಾರ ಪಂಪಾಪತಿ(77) ಕೊಲೆಯಾದವರು ಎಂದು ಹೇಳಲಾಗಿದೆ.
ರಾಯಚೂರಿನ ನಿಜಲಿಂಗಪ್ಪ ಕಾಲೋನಿಯಲ್ಲಿ ಪಂಪಾವತಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ರಾಯಚೂರು ಪಶ್ಚಿಮ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.