alex Certify ಶಿವಮೊಗ್ಗ: ಹಾಡಹಗಲೇ ವ್ಯಕ್ತಿಯ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ: ಹಾಡಹಗಲೇ ವ್ಯಕ್ತಿಯ ಕೊಲೆ

ಶಿವಮೊಗ್ಗ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಹಾಡಹಗಲೇ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಥಳಿಸಿ ಕೊಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ.

ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ತಿಮ್ಲಾಪುರ ಗ್ರಾಮದಲ್ಲಿ 45 ವರ್ಷದ ಶಿವಲಿಂಗಪ್ಪ ಎಂಬುವರನ್ನು ಕೊಲೆ ಮಾಡಲಾಗಿದೆ.

ಶಿವಲಿಂಗಪ್ಪ ಅವರ ಮಾವ ಹೊನ್ನಪ್ಪನವರಿಗೆ ಒಂದು ಎಕರೆ ಜಮೀನು ಇದ್ದು, ಈ ಜಮೀನನ್ನು ಕಬಳಿಸಲು ಗ್ರಾಮದ ಕೆಲವರು ಪ್ರಯತ್ನ ನಡೆಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿವಲಿಂಗಪ್ಪರೊಂದಿಗೆ ಜಗಳವಾಗಿ ಅವರನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...