alex Certify ಶಿವಮೊಗ್ಗದಲ್ಲಿ ತಡರಾತ್ರಿ ಯುವಕನ ಹತ್ಯೆ, ಮತ್ತೊಬ್ಬ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ ತಡರಾತ್ರಿ ಯುವಕನ ಹತ್ಯೆ, ಮತ್ತೊಬ್ಬ ಗಂಭೀರ

ಶಿವಮೊಗ್ಗ: ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳು ನಡೆಸಿದ ದಾಳಿಯಲ್ಲಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ ನಗರದ ಸುಂದರ ಆಶ್ರಯ ಬಾರ್ ಬಳಿ ಘಟನೆ ನಡೆದಿದೆ. ಐದಾರು ಯುವಕರ ತಂಡದಿಂದ ದಾಳಿ ನಡೆಸಲಾಗಿದ್ದು, ಮಾರಣಾಂತಿಕ ಹಲ್ಲೆಯಿಂದ 26 ವರ್ಷದ ಜೀವನ್ ಸಾವನ್ನಪ್ಪಿದ್ದಾರೆ. ಕೇಶವ್ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೀವನ್ ಡ್ಯಾನ್ಸ್ ಮಾಸ್ಟರ್ ಆಗಿದ್ದು, ಕೇಶವ್ ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಸುಂದರ ಆಶ್ರಯ ಬಾರ್ ಬಳಿ ಇರುವ ಶ್ರೀನಿವಾಸ ದೇವಾಲಯ ಸಮೀಪ ಮಾತನಾಡುತ್ತಿದ್ದ ನಿಂತಿದ್ದಾಗ, ದುಷ್ಕರ್ಮಿಗಳು ದಾಳಿ ಮಾಡಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...