ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಆದರ್ಶ ನಗರದಲ್ಲಿ ಸೊಸೆಯನ್ನು ಕೊಲೆ ಮಾಡಿ ಮಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
35 ವರ್ಷದ ಸೊಸೆಯನ್ನು ಕೊಲೆಮಾಡಿದ 52 ವರ್ಷದ ಚಿಕ್ಕ ಹುಚ್ಚಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕ ಹುಚ್ಚಯ್ಯ ಅವರ ಪುತ್ರ ತಾಲೂಕು ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರರರಾಗಿದ್ದು ಶನಿವಾರ ಮಧ್ಯಾಹ್ನ ಮನೆಗೆ ಬಂದ ವೇಳೆ ಪತ್ನಿಯನ್ನು ಕೊಲೆ ಮಾಡಿ ತಂದೆ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎನ್ನಲಾಗಿದೆ. ಡೆತ್ ನೋಟ್ ಬರೆದಿಟ್ಟು ಚಿಕ್ಕಹುಚ್ಚಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.