ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರದ ಅಪಾರ್ಟ್ ಮೆಂಟ್ ವೊಂದರಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
35 ವರ್ಷದ ವಿಶಾಲ ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಗಂಗೊಳ್ಳಿ ಮೂಲದ ವಿಶಾಲ ಅವರ ಕುತ್ತಿಗೆಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ವಿಶಾಲ ಅವರನ್ನು ಕೊಲೆ ಮಾಡಿದ ನಂತರ ದುಷ್ಕರ್ಮಿಗಳು ಮನೆಯಲ್ಲಿದ್ದ ನಗದು, ಚಿನ್ನಾಭರಣ ದೋಚಿರುವ ಶಂಕೆ ವ್ಯಕ್ತವಾಗಿದೆ.
ಕೆಲವು ದಿನಗಳ ಹಿಂದೆಯಷ್ಟೇ ವಿದೇಶದಿಂದ ಆಗಮಿಸಿದ್ದ ವಿಶಾಲ ಅಪಾರ್ಟ್ ಮೆಂಟ್ ನಲ್ಲಿ ಉಳಿದುಕೊಂಡಿದ್ದರು. ಸಂಜೆ ವೇಳೆಗೆ ಗಂಗೊಳ್ಳಿ ಮನೆಗೆ ಬರುವುದಾಗಿ ಕುಟುಂಬದವರಿಗೆ ತಿಳಿಸಿದ್ದರು. ಆದರೆ, ಸಂಜೆಯಾದರೂ ಮನೆಗೆ ಆಗಮಿಸಿದ ಕಾರಣ ಅವರ ತಂದೆ ಹುಡುಕಿಕೊಂಡು ಬಂದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ವಿಶಾಲ ಬ್ಯಾಂಕ್ ನಿಂದ ಮರಳಿದ ನಂತರ ಕೊಲೆಯಾಗಿದ್ದಾರೆ ಎನ್ನಲಾಗಿದೆ. ಬ್ರಹ್ಮಾವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.