
ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ರೌಡಿಶೀಟರ್, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಪ್ರದೀಪ ಎಂಟಮಾನೆ ಅವರನ್ನು ಹತ್ಯೆ ಮಾಡಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ತೆರಳಿದ್ದ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಬಡಿಗೆ, ಕಲ್ಲುಗಳಿಂದ ಹಲ್ಲೆ ಮಾಡಿ ಪ್ರದೀಪ ಎಂಟಮಾನೆ ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆನ್ನಲಾಗಿದೆ. ಸ್ಥಳಕ್ಕೆ ಅಲಮೇಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.