alex Certify ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಖಂಡಿಕಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಸರವಳ್ಳಿ ಗ್ರಾಮದಲ್ಲಿ ಪತಿಯೇ ಪತ್ನಿಗೆ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ.

ಗುರುಮೂರ್ತಿ ಎಂಬಾತನೇ ಇಂತಹ ಕೃತ್ಯವೆಸಗಿದ ಆರೋಪಿ. 11 ವರ್ಷದ ಹಿಂದೆ ಜ್ಯೋತಿ ಅವರನ್ನು ಪ್ರೀತಿಸಿ ಮದುವೆಯಾಗಿದ್ದು, ನಾಲ್ಕೈದು ವರ್ಷಗಳಿಂದ ದಂಪತಿ ನಡುವೆ ಸಣ್ಣಪುಟ್ಟ ವಿಷಯಗಳಿಗೂ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ.

ಜ್ಯೋತಿ ಅವರ ತಂದೆ-ತಾಯಿ ಸಂಧಾನ ನಡೆಸಿದ್ದರು. ಗುರುವಾರ ಊಟದ ವಿಚಾರಕ್ಕೆ ಜಗಳ ತೆಗೆದ ಗುರುಮೂರ್ತಿ, ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ತೀವ್ರ ಸುಟ್ಟ ಗಾಯಗಳಾಗಿದ್ದ ಜ್ಯೋತಿ ಅವರನ್ನು ಸ್ಥಳೀಯರು ರಕ್ಷಿಸಿ ಸಾಗರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಜ್ಯೋತಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...