ದಾವಣಗೆರೆ: ಪತಿಯನ್ನು ಕೊಲೆ ಮಾಡಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನ್ನು ದಾವಣಗೆರೆ ಜಿಲ್ಲೆ ಚನ್ನಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚನ್ನಗಿರಿ ತಾಲ್ಲೂಕು ವಡ್ನಾಳ್ ಬನ್ನಿಹಟ್ಟಿ ಗ್ರಾಮದ ಪುಷ್ಪಾ ಅಲಿಯಾಸ್ ಕುಸುಮಾ(30) ಮತ್ತು ಕೆರೆಬಿಳಚಿ ಗ್ರಾಮದ ಪ್ರಿಯಕರ ಪ್ರಭುಲಿಂಗಪ್ಪ(35) ಬಂಧಿತರು ಎಂದು ಹೇಳಲಾಗಿದೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ವಡ್ನಾಳ್ ಬನ್ನಿಹಟ್ಟಿ ಗ್ರಾಮದ ಲೋಕೇಶಪ್ಪ(38)ನನ್ನು ಕೊಲೆ ಮಾಡಲಾಗಿತ್ತು. ಜುಲೈ 27 ರಂದು ಆರೋಪಿಗಳು ಕೊಲೆ ಮಾಡಿದ್ದರು. ಮನೆಯಲ್ಲಿಯೇ ವೇಲ್ ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದರು. ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ, ಮೃತನ ಪತ್ನಿ ಹಾಗೂ ಪ್ರಿಯಕರ ತಪ್ಪೊಪ್ಪಿಕೊಂಡಿದ್ದಾರೆನ್ನಲಾಗಿದೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.