HomeKarnatakaದನಗಳ ಮೈ ತೊಳೆಯಲು ಕೆರೆಗೆ ಹೋಗಿದ್ದ ರೈತನ ಮೇಲೆ ಮೊಸಳೆ ದಾಳಿ

ದನಗಳ ಮೈ ತೊಳೆಯಲು ಕೆರೆಗೆ ಹೋಗಿದ್ದ ರೈತನ ಮೇಲೆ ಮೊಸಳೆ ದಾಳಿ

ರಾಯಚೂರು: ದನಗಳ ಮೈ ತೊಳೆಯಲೆಂದು ಕೆರೆಗೆ ಹೋಗಿದ್ದ ರೈತರಿಬ್ಬರ ಮೇಲೆ ಮೊಸಳೆ ದಾಳಿ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಸರ್ಜಾಪುರದಲ್ಲಿ ನಡೆದಿದೆ.

ಮಹಾನಂದ ಮೊಸಳೆ ದಾಳಿಯಿಂದ ಗಾಯಗೊಂಡಿರುವ ರೈತ. ಎತ್ತುಗಳ ಮೈ ತೊಳೆಯಲೆಂದು ಮಹಾನಂದ ಕೆರೆಗೆ ಹೋಗಿದ್ದರು. ಈ ವೇಳೆ ಏಕಾಎಕಿ ಮೊಸಳೆ ದಾಳಿ ನಡೆಸಿದೆ. ರೈತನ ಬಲಗಾಲಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳು ರೈತನನ್ನು ರಾಯಚೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಗ್ರಾಮಸ್ಥರ ಸಹಾಯದಿಂದ ಮೊಸಳೆ ಸೆರೆ ಹಿಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular