HomeKarnatakaಜಿಲ್ಲಾಧಿಕಾರಿ ಮಟ್ಟದಲ್ಲೇ ಬೆಳೆ ಹಾನಿ ಪರಿಹಾರ: ರೈತರ ಖಾತೆಗೆ ನೇರ ವರ್ಗಾವಣೆ

ಜಿಲ್ಲಾಧಿಕಾರಿ ಮಟ್ಟದಲ್ಲೇ ಬೆಳೆ ಹಾನಿ ಪರಿಹಾರ: ರೈತರ ಖಾತೆಗೆ ನೇರ ವರ್ಗಾವಣೆ

ಬೆಂಗಳೂರು: ಅತಿವೃಷ್ಟಿ, ಅನಾವೃಷ್ಟಿ ನೈಸರ್ಗಿಕ ವಿಕೋಪದಿಂದ ಉಂಟಾಗುವ ಬೆಳೆ ಹಾನಿ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿಗಳ ಮಟ್ಟದಲ್ಲಿಯೇ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.

ಕಂದಾಯ ಇಲಾಖೆ ವತಿಯಿಂದ ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ಅತಿವೃಷ್ಟಿ, ಪ್ರವಾಹ, ಆಲಿಕಲ್ಲು ಮಳೆ, ಬರದಿಂದ ಸ್ಥಳೀಯ ಮಟ್ಟದಲ್ಲಿ ಉಂಟಾಗುವ ಬೆಲೆ ಹಾನಿಗಳಿಗೆ ಜಿಲ್ಲಾಧಿಕಾರಿ ಮಟ್ಟದಲ್ಲಿಯ ಪರಿಹಾರ ನೀಡಬೇಕು ಎಂದು ತಿಳಿಸಲಾಗಿದೆ.

ಅರ್ಹ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕವೇ ಬೆಳೆ ಹಾನಿ ಪರಿಹಾರ ಒದಗಿಸಬೇಕು. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಅನುಮೋದನೆಯಾದ ಬಳಿಕ ಅರ್ಹ ರೈತರ ಖಾತೆಗೆ ಪರಿಹಾರದ ಮೊತ್ತವನ್ನು ನೇರವಾಗಿ ವರ್ಗಾವಣೆ ಮಾಡಬೇಕೆಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular