HomeAgricultureಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಗಳಲ್ಲಿ ಬೆಳೆ ವಿಮೆಗೆ ನೋಂದಾಯಿಸಲು...

ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಗಳಲ್ಲಿ ಬೆಳೆ ವಿಮೆಗೆ ನೋಂದಾಯಿಸಲು ಅವಕಾಶ

ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆ ಜೋಳ, ನೀರಾವರಿ ಮತ್ತು ಮಳೆಯಾಶ್ರಿತ ಬೆಳೆ ಕಡಲೆ ಮತ್ತು ಬೇಸಿಗೆ ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆಗಳಾದ ನೆಲಗಡಲೆ(ಶೇಂಗಾ), ಭತ್ತ ಹಾಗೂ ಹೋಬಳಿ ಮಟ್ಟದ ಹಿಂಗಾರು ಹಂಗಾಮಿನ ನೀರಾವರಿ ಬೆಳೆ ಮುಸುಕಿನ ಜೋಳ, ನೀರಾವರಿ/ಮಳೆಯಾಶ್ರಿತ ಬೆಳೆ ಸೂರ್ಯಕಾಂತಿ, ಕುಸುಮೆ, ಈರುಳ್ಳಿ ಮತ್ತು ಬೇಸಿಗೆ ಹಂಗಾಮಿನ ನೀರಾವರಿ ಬೆಳೆಗಳಾದ ಸೂರ್ಯಕಾಂತಿ, ಈರುಳ್ಳಿ ಜಿಲ್ಲೆಯ ಬೆಳೆಗಳಾಗಿವೆ.

ಬೆಳೆ ವಿಮೆಗೆ ಕೊನೆಯ ದಿನ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂಗಾರು ಹಂಗಾಮಿನ ಬೆಳೆಗಳಾದ ಜೋಳ, ಮುಸುಕಿನ ಜೋಳ, ಸೂರ್ಯಕಾಂತಿ, ಕುಸುಮೆ ಬೆಳೆಗಳಿಗೆ ಡಿ.16 ಆಗಿದೆ. ಅದರಂತೆ ಮಳೆಯಾಶ್ರಿತ ಬೆಳೆ ಜೋಳ ನ.15, ಈರುಳ್ಳಿ ಬೆಳೆಗೆ ನ.30.

ಬೇಸಿಗೆ ಬೆಳೆಗಳಾದ ಭತ್ತ, ನೆಲಗಡಲೆ(ಶೇಂಗಾ), ಸೂರ್ಯಕಾಂತಿ ಮತ್ತು ಈರುಳ್ಳಿ ಬೆಳೆಗಳಿಗೆ 2025 ರ ಫೆ.28 ಕೊನೆಯ ದಿನವಾಗಿದೆ. ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್/ಸಾರ್ವಜನಿಕ ಸೇವಾ ಕೇಂದ್ರಗಳಿಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular