HomeKarnatakaBIG NEWS: ರಾಜ್ಯದಲ್ಲಿ ಮಳೆ ಇಲ್ಲದೇ 28 ಸಾವಿರ ಕೋಟಿ ರೂ. ಮೌಲ್ಯದ ಬೆಳೆ ಹಾನಿ:...

BIG NEWS: ರಾಜ್ಯದಲ್ಲಿ ಮಳೆ ಇಲ್ಲದೇ 28 ಸಾವಿರ ಕೋಟಿ ರೂ. ಮೌಲ್ಯದ ಬೆಳೆ ಹಾನಿ: ಬರ ಅಧ್ಯಯನಕ್ಕೆ ಕೇಂದ್ರ ತಂಡ ಭೇಟಿ

ಕೋಲಾರ: ಬರ ಘೋಷಣೆ ಬೆನ್ನಲ್ಲೇ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಕಳುಹಿಸಲಾಗಿದೆ. ನಾವು ಕೂಡ ಖುದ್ದಾಗಿ ತೆರಳಿ ವಾಸ್ತವ ಸ್ಥಿತಿ ಮನವರಿಕೆ ಮಾಡಲಿದ್ದು, ಅಕ್ಟೋಬರ್ 10 ರೊಳಗೆ ಕೇಂದ್ರದ ನಿಯೋಗ ರಾಜ್ಯಕ್ಕೆ ಭೇಟಿ ನೀಡಲಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ.

ಕೋಲಾರದಲ್ಲಿ ಶನಿವಾರ ಕೃಷಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಂಗಾರು ಕೊರತೆಯಿಂದ ರಾಜ್ಯದಲ್ಲಿ 40 ಲಕ್ಷ ಹೆಕ್ಟೇರ್ ಪ್ರದೇಶದ 28,000 ಕೋಟಿ ರೂ. ಮೌಲ್ಯದ ಬೆಳೆ ಹಾನಿಯಾಗಿದೆ ಎಂದು ಸಮೀಕ್ಷೆಗಳು ಅಂದಾಜಿಸಿವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎನ್.ಡಿ.ಆರ್.ಎಫ್. ಮಾರ್ಗಸೂಚಿ ಅನ್ವಯ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಬೆಳೆ ಹಾನಿ ಸಮೀಕ್ಷೆ ನಡೆಸಿ ವರದಿ ಸಲ್ಲಿಕೆಗೆ ಸೆಪ್ಟೆಂಬರ್ 30ರ ಗಡುವು ನೀಡಿದ್ದು, ಇನ್ನೂ 10 ದಿನಗಳಲ್ಲಿ ಬೆಳೆಹಾನಿಯ ಸಮಗ್ರ ಮಾಹಿತಿ ತಿಳಿಯಲಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular