HomeBusinessರಾಜ್ಯದ ಜನತೆಗೆ ಶಾಕ್: ಮಳೆ ಕೊರತೆಯಿಂದ ಆಹಾರ ಧಾನ್ಯ ಉತ್ಪಾದನೆ ಕುಸಿತ: ತಟ್ಟಲಿದೆ ಬೆಲೆ ಏರಿಕೆ...

ರಾಜ್ಯದ ಜನತೆಗೆ ಶಾಕ್: ಮಳೆ ಕೊರತೆಯಿಂದ ಆಹಾರ ಧಾನ್ಯ ಉತ್ಪಾದನೆ ಕುಸಿತ: ತಟ್ಟಲಿದೆ ಬೆಲೆ ಏರಿಕೆ ಬಿಸಿ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಭಾರಿ ಪ್ರಮಾಣದಲ್ಲಿ ಬೆಳೆ ಹಾನಿಯಾಗಿ ಇಳುವರಿ ಕಡಿಮೆಯಾಗಿದೆ. ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಹೆಚ್ಚು ಕುಂಠಿತವಾಗಲಿದ್ದು, ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳ ಬೆಲೆ ಏರಿಕೆಯಾಗಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ಇನ್ನಷ್ಟು ತಟ್ಟಲಿದೆ.

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 82.35 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. 74 32 ಲಕ್ಷ ಹೆಕ್ಟೇರ್ ನಲ್ಲಿ ಬಿತ್ತನೆಯಾಗಿ ಸಕಾಲಕ್ಕೆ ಮಳೆಯಾಗದ ಕಾರಣ ಭಾರತ ಬೆಳೆದ ಬೆಳೆಗಳು ಹಸಿರಾಗಿದ್ದರೂ ಕಾಳು ಕಟ್ಟಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆಕ್ಕೆಜೋಳ, ರಾಗಿ, ಭತ್ತ ಸೇರಿ 43 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿ ರಾಜ್ಯದ ಆಹಾರ ಧಾನ್ಯಗಳ ಇಳುವರಿಯಲ್ಲಿ ಭಾರಿ ಕುಂಠಿತವಾಗಿದೆ. ಇದರ ಪರಿಣಾಮ ಆಹಾರ ಧಾನ್ಯಗಳ ಬೆಲೆ ಏರಿಕೆಯಾಗಿ ಬಿಸಿ ತಟ್ಟಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular