ಮಂಡ್ಯ: ಮಂಡ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೋಟಿ ಕೋಟಿ ಅಕ್ರಮ ನಡೆಸಿರುವ ಆರೋಪ ಕೇಳಿ ಬಂದಿದೆ. ಮೃತಪಟ್ಟವರ ಹೆಸರಲ್ಲಿಯೂ ಭ್ರಷ್ಟ ಅಧಿಕಾರಿಗಳು ಲೂಟಿ ಹೊಡೆದಿದ್ದಾರೆ.
ಮಂಡ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಂಗವಿಕಲರು, ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದ ಆರೋಪ ಕೇಳಿ ಬಂದಿದೆ. ಸ್ಥಗಿತಗೊಂಡಿದ್ದ ಸ್ವಯಂ ಸೇವಾ ಸಂಸ್ಥೆಯ ಹೆಸರು ಬಳಸಿಕೊಂಡು ಕೋಟಿ ಕೋಟಿ ಗುಳುಂ ಮಾಡಲಾಗಿದೆ.
ಶ್ರೀರಂಗಪಟ್ಟಣದ ರಾಮೇಗೌಡ ಎಂಬುವರಿಗೆ ಸೇರಿದ್ದ ರಿವರ್ ವ್ಯಾಲಿ ಸಂಸ್ಥೆ ಹೆಸರು ಬಳಕೆ ಮಾಡಲಾಗಿದೆ. ಸಂಸ್ಥೆಯ ಸ್ಥಾಪಕ ರಾಮೇಗೌಡ ಮೃತಪಟ್ಟಿದ್ದರೂ ಹೆಸರು ಬಳಸಿ ಅಕ್ರಮ ನಡೆಸಲಾಗಿದೆ. ನಕಲಿ ಫಲಾನುಭವಿಗಳು, ಸಿಬ್ಬಂದಿಯ ದಾಖಲೆ ಸೃಷ್ಟಿಸಿ ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಬರೋಬ್ಬರಿ ನಾಲ್ಕು ಕೋಟಿ ರೂಪಾಯಿಗೂ ಹೆಚ್ಚು ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಮಂಡ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಅಕ್ರಮದ ವಿರುದ್ಧ ದೂರು ದಾಖಲಾಗಿದೆ. ಲೋಕಾಯುಕ್ತಕ್ಕೆ ರಿವರ್ ವ್ಯಾಲಿ ಸಂಸ್ಥೆಯ ಅಧ್ಯಕ್ಷ ಆದರ್ಶ್ ದೂರು ನೀಡಿದ್ದಾರೆ. ಭ್ರಷ್ಟಾಚಾರದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಅಗ್ರಹಿಸಿದ್ದಾರೆ.

