ಆಟೋದಲ್ಲಿ ಕೋಟಿ ಕೋಟಿ ಹಣ ಸಾಗಾಟ: ಚಾಲಕ ಸೇರಿ ಇಬ್ಬರು ಅಂದರ್ !

ಕೋಚಿಯ ವೆಲ್ಲಿಂಗ್ಟನ್ ದ್ವೀಪದಲ್ಲಿ ಕಣ್ಣಂಗಾಡ್ ಸೇತುವೆಯ ಬಳಿ ನಿಂತಿದ್ದ ಆಟೋರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 2.7 ಕೋಟಿ ರೂಪಾಯಿ ಪತ್ತೆಯಾಗಿದೆ. ಪೊಲೀಸರು ತಪಾಸಣೆ ನಡೆಸಿದಾಗ ಇಷ್ಟು ದೊಡ್ಡ ಮೊತ್ತದ ಹಣ ಪತ್ತೆಯಾಗಿದ್ದು, ತಕ್ಷಣವೇ ಆಟೋರಿಕ್ಷಾ ಚಾಲಕ ರಾಜಗೋಪಾಲ್ ಮತ್ತು ಬಿಹಾರ ಮೂಲದ ಸಬಿಶ್ ಅಹ್ಮದ್ ಎಂಬಾತನನ್ನು ಬಂಧಿಸಿದ್ದಾರೆ. ಈ ಹಣ ಕಪ್ಪು ಹಣವೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಎರ್ನಾಕುಲಂ ಬ್ರೋಡ್‌ವೇಯಲ್ಲಿರುವ ಸಂಸ್ಥೆಯೊಂದರ ಮಾಲೀಕರು ಈ ಹಣವನ್ನು ನೀಡಿದ್ದಾರೆ ಎಂಬ ಸುಳಿವು ಸಿಕ್ಕಿದೆ. ವೆಲ್ಲಿಂಗ್ಟನ್ ಕಡೆಗೆ ಬರುವಂತೆ ಸೂಚನೆ ನೀಡಿದ ಬಳಿಕ ಆರೋಪಿಗಳು ಹಣದೊಂದಿಗೆ ಬಂದಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈ ಹಣದ ಮೂಲ ಮತ್ತು ಉದ್ದೇಶದ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಹಣದ ಮೂಲ ಮತ್ತು ಸಾಗಾಟದ ಉದ್ದೇಶದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಎರ್ನಾಕುಲಂನಿಂದ ವೆಲ್ಲಿಂಗ್ಟನ್‌ಗೆ ಇಷ್ಟು ದೊಡ್ಡ ಮೊತ್ತದ ಹಣವನ್ನು ಆಟೋದಲ್ಲಿ ಸಾಗಿಸುತ್ತಿದ್ದುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆಯ ನಂತರವಷ್ಟೇ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read