HomeKarnatakaಅಡ್ಡ ಮತದಾನ ಪ್ರಕರಣ: ಸಿ.ಟಿ.ರವಿ ನೇತೃತ್ವದ ಸಮಿತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ವರದಿ ಸಲ್ಲಿಕೆ

ಅಡ್ಡ ಮತದಾನ ಪ್ರಕರಣ: ಸಿ.ಟಿ.ರವಿ ನೇತೃತ್ವದ ಸಮಿತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ವರದಿ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಚಿಸಿದ್ದ ಸಿ.ಟಿ.ರವಿ ನೇತೃತ್ವದ ಸತ್ಯಶೋಧನಾ ಸಮಿತಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ವರದಿ ಸಲ್ಲಿಸಿದೆ.

ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಶಾಸಕ ಮಹೇಶ್ ಟೆಂಗಿನಕಾಯಿ ಹಾಗೂ ಎನ್ ಮಹೇಶ್ ನೇತೃತ್ವದ ತ್ರಿಸದಸ್ಯ ಸಮಿತಿಯು ಅಡ್ಡ ಮತದಾನದ ಬಗ್ಗೆ ಆಂತರಿಕ ಸತ್ಯಶೋಧನೆ ನಡೆಸಿ, ಸಾಂದರ್ಭಿಕ ಸಾಕ್ಷಿ, ಶಂಕೆ, ಮೂಲಗಳಿಂದ ಸಂಗ್ರಹಿಸಿದ ಮಾಹಿತಿ ಹಾಗೂ ಅನುಮಾನ ಇದ್ದ ಶಾಸಕರಿಂದ ಪಡೆದ ಮಾಹಿತಿ ಆಧರಿಸಿ ವರದಿ ಸಿದ್ಧಪಡಿಸಿದ್ದಾರೆ. ಈ ಮಧ್ಯಂತರ ವರದಿಯನ್ನು ಬಿಜೆಪಿ ಕಚೇರಿಯಲ್ಲಿ ಸಲ್ಲಿಕೆ ಮಾಡಿದ್ದು, ಬಳಿಕ ಬಿ.ವೈ.ವಿಜಯೇಂದ್ರ ಹಾಗೂ ಸಿ.ಟಿ ರವಿ ಇಬ್ಬರೂ ಪ್ರತ್ಯೇಕವಾಗಿ ಚರ್ಚೆ ನಡೆಸಿದರು.

ನಾಲ್ಕು ದಿನಗಳ ಕಾಲ ಆಂತರಿಕ ತನಿಖೆ ನಡೆಸಿದ ಸಮಿತಿಯು ಒಟ್ಟು ಮೂರು ಪುಟಗಳ ವರದಿಯನ್ನು ಸೀಲ್ಡ್ ಕವರ್‌ನಲ್ಲಿ ಸಲ್ಲಿಕೆ ಮಾಡಿದೆ. ಮೈತ್ರಿ ಪಕ್ಷಗಳಿಂದ ಒಟ್ಟು 12 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಈ ಪೈಕಿ 1 ಅಸಿಂಧು ಮತ. ಬಿಜೆಪಿಯಿಂದ 1 ಅಸಿಂಧು ಮತ ಸೇರಿ ಒಟ್ಟು 4 ಅಡ್ಡಮತದಾನ ಆಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಹೊರತಾಗಿ ಉಳಿದ ಅಡ್ಡ ಮತಗಳು ಜೆಡಿಎಸ್‌ನಿಂದಾಗಿವೆ. ವರದಿಯಲ್ಲಿ ಅಡ್ಡ ಮತ ಚಲಾಯಿಸಿದ ಶಾಸಕರ ಹೆಸರು ಉಲ್ಲೇಖಿಸಿಲ್ಲ ಎನ್ನಲಾಗಿದ್ದು, ಅಡ್ಡ ಮತಗಳ ಸಂಖ್ಯೆ ಮಾತ್ರ ಉಲ್ಲೇಖಿಸಿದ್ದಾರೆ. ಸದ್ಯಕ್ಕೆ ಅನುಮಾನ ಇರುವ ಶಾಸಕರ ಮೇಲೆ ತೀವ್ರ ನಿಗಾ ಇಡುವಂತೆ ಸಮಿತಿ ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular